ಬಳ್ಳಾರಿ - ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಷರತ್ತು ಬದ್ಧ ಜಾಮೀನು ಮಂಜೂರು ಆಗಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಜೈಲಾಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಕೋರ್ಟ್ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಏನೆಲ್ಲ ಪ್ರಕ್ರಿಯೆ ನಡೆಯಬೇಕಿದೆ ಎಂಬ ಚರ್ಚೆ ನಡೆದಿದೆ.
131 ದಿನಗಳ ಜೈಲು ವಾಸದಿಂದ ಸದ್ಯ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರಾಗಿದೆ. 6 ವಾರಗಳ ಮಧ್ಯಂತರ ಜಾಮೀನು ಮಂಜೂರಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಪಡೆಯಲು ಕೋರ್ಟ್ ಆದೇಶ ನೀಡಿದೆ.