ಕರ್ನಾಟಕ

ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ಡೆಡ್ಲಿ ಅಟ್ಯಾಕ್

ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ಡೆಡ್ಲಿ ಅಟ್ಯಾಕ್ ಮಾಡಿರೋ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಹೊಸಕೋಟೆಯಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ಡೆಡ್ಲಿ ಅಟ್ಯಾಕ್ ಮಾಡಿರೋ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಹೊಸಕೋಟೆಯಲ್ಲಿ ನಡೆದಿದೆ.

ನಗರದ ಕಣ್ಣೂರಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಕಳೆದ ಒಂದು ವಾರದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಟ್ಯೂಷನ್ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ದ್ವೀತಿಯ ಪಿಯುಸಿ ವಿದ್ಯಾರ್ಥಿ ಸೈಯದ್ ಇಶಾನ್ ಮೇಲೆ ಹತ್ತಾಕ್ಕೂ ಹೆಚ್ಚು ದುಷ್ಕರ್ಮಿಗಳು ಲಾಂಗು, ಮಚ್ಚು ವಿಕೇಟ್  ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಸದ್ಯಕ್ಕೆ ಆಸ್ಪತ್ರೆಯಲ್ಲಿ ಸೈಯದ್ ಇಶಾನ್ ಚಿಕಿತ್ಸೆ ಪಡೆಯುತ್ತಿದ್ದು,ಸಿಸಿಟಿವಿ ದೃಶ್ಯ ಆಧರಿಸಿ 9 ಜನರ ವಿರುದ್ಧ ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಶೀಘ್ರಬಂಧಿಸುವಂತೆ  ಕುಟುಂಬಸ್ಥರಿಂದ ಒತ್ತಾಯಿಸಿದ್ದಾರೆ.