ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ʼಗಾಂಧಿ ಭಾರತʼ ಕಾರ್ಯಕ್ರಮದಲ್ಲಿ ಭಾರತದ ಭೂಪಟವನ್ನ ತಪ್ಪಾಗಿ ತೋರಿಸುವ ಪೋಸ್ಟರ್ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.. ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನ ಇದು ಸೂಚಿಸುತ್ತಿದೆ ಅಂತ ವಾಗ್ದಾಳಿ ನಡೆಸಿದ್ದಾರೆ.. ಕರ್ನಾಟಕದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಈ ರೀತಿಯ ಭಾರತೀಯ ನಕ್ಷೆಯನ್ನು ಬಳಸಿದೆ.. ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ.. ಕಾಂಗ್ರೆಸ್ ನಾಯಕರ ಈ ನಡೆ ಖಂಡಿಸಿ ನಾಳೆ ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ನಮ್ಮ ಎಲ್ಲಾ ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ಮಾಡುತ್ತೇವೆ ಅಂತಾ ಗುಡುಗಿದ್ದಾರೆ..