ಬೆಂಗಳೂರು: ಅಮೆರಿಕಾದಿಂದ ಭಾರತದ ಅಕ್ರಮ ವಲಸಿಗರನ್ನ ಗಡಿಪಾರು ಮಾಡಿರುವುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ವಲಸಿಗರು ಮನುಷ್ಯರೇ.. ಪ್ರಾಣಿಗಳಲ್ಲ. ಅವರನ್ನು ಅಪರಾಧಿಗಳಂತೆ ಕೈ-ಕಾಲಿಗೆ ಕೋಳ ಹಾಕಿ ಕರೆತಂದಿದ್ದು ತಪ್ಪು. ಅಮೆರಿಕದಂತಹ ಮುಂದುವರೆದ ದೇಶದಿಂದ ಇಂತಹ ನಡೆ ಖಂಡನೀಯ ಎಂದು ಆಗ್ರಹಿಸಿದ್ದಾರೆ.
ಭಾರತೀಯರು ಅಕ್ರಮವಾಗಿ ಅವರ ದೇಶದಲ್ಲಿ ನೆಲೆಸಿದ್ದರೆ, ಅದಕ್ಕೆ ಯಾವ ಶಿಕ್ಷೆ ನೀಡಬೇಕೋ ಅದನ್ನ ನೀಡಲಿ. ಅದನ್ನು ಬಿಟ್ಟು, ಈ ರೀತಿ ಖೈದಿಗಳಿಗೆ ಹಾಕಿದಂತೆ ಸರಪಳಿ ಹಾಕಿರುವುದನ್ನು ಯಾರಿಂದಲೂ ಒಪ್ಪಲು ಸಾಧ್ಯವಿಲ್ಲ. ಇದು ಮಾನವ ಕುಲಕ್ಕೆ ಅಗೌರವ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.