ಉಡುಪಿ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಾಗಿ ಅಧಿಕಾರ ವಹಿಸಿ 1 ವರ್ಷ ಪೂರೈಸಿರುವ ಡಾ| ಅರುಣ್ ಕೆ. ಅವರು ಪೊಲೀಸರ ಕರ್ತವ್ಯದ ಬಗ್ಗೆ ಗಮನಹರಿಸುತ್ತಿದ್ದು, ಒಂದು ವರ್ಷದಿಂದಲೂ ವಿವಿಧ ಕಾರಣಗಳಿಂದ ಕರ್ತವ್ಯಲೋಪ ಮಾಡಿದವರಿಗೆ ಅಮಾನತು ಮಾಡಿ ವರ್ಗಾವಣೆ ಶಿಕ್ಷೆ ನೀಡಲಾಗಿದೆ.
ಹೌದು, ಜಿಲ್ಲೆಯಲ್ಲಿ ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರದ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಕಠಿನ ಕ್ರಮಕ್ಕೆ ಮುಂದಾಗಿದ್ದು, ಕರ್ತವ್ಯ ಲೋಪ ಆರೋಪದಲ್ಲಿ ಒಂದು ವರ್ಷದಲ್ಲಿ 4 ಮಂದಿ ಎಸ್ ಐಗಳು ಸಹಿತ 80ಕ್ಕೂ ಅಧಿಕ ಸಿಬಂದಿ ಅಮಾನತುಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಷ್ಟೊಂದು ಪೊಲೀಸರು ಅಮಾನತುಗೊಳ್ಳುತ್ತಿರುವುದು.
4 ಮಂದಿ ಎಸ್ ಐಗಳು ; ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ 4 ಮಂದಿ ಎಸ್ ಐಗಳ ಪೈಕಿ ಕೆಲವರ ಅಮಾನತು ಆದೇಶ ಮಾಡಿದ್ದು, ಹಿಂದೆ ಸೇವೆ ಸಲ್ಲಿಸುತ್ತಿದ್ದ ಠಾಣೆ ಬಿಟ್ಟು ಬೇರೆ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅಕ್ರಮ ಮರಳು ಸಾಗಾಟಗಾರರೊಂದಿಗೆ ಶಾಮೀಲಾಗಿರುವುದು.
ಶಿಕ್ಷೆ ಹೇಗೆ ?
ಪೊಲೀಸರ ವಿರುದ್ಧ ಭ್ರಷ್ಟಾಚಾರ ಸಹಿತ ವಿವಿಧ ಆರೋಪಗಳು ಬಂದಾಗ ಸಾರ್ವಜನಿಕರು ಎಸ್ ಪಿ ಅವರ ಗಮನಕ್ಕೆ ತರಬಹುದು. ಎಸ್ ಐಗಳ ಮೇಲೆ ಆರೋಪ ಬಂದಾಗ ಅವರು ಸರ್ಕಲ್ ಇನ್‌ಸ್ಪೆಕ್ಟರ್ ಗೆ ಮಾಹಿತಿ ನೀಡಿ ವರದಿ ನೀಡುವಂತೆ ಸೂಚಿಸುತ್ತಿದ್ದು, ಆ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕಾನ್ ಸ್ಟೆಬಲ್ ಗಳ ವಿರುದ್ಧ ಆರೋಪ ಬಂದಾಗ ಎಸ್ ಐಗಳು ಹಾಗೂ ಇನ್ ಸ್ಪೆಕ್ಟರ್ ಗಳ ವಿರುದ್ಧ ಆರೋಪ ಬಂದಲ್ಲಿ ಡಿವೈಎಸ್ ಪಿ ವರದಿ ನೀಡಬೇಕು. ಆದರೆ ಅರ್ಧ ವೇತನ ಅಮಾನತು ಆದೇಶ ಕನಿಷ್ಠ 1 ತಿಂಗಳಿನಿಂದ ಗರಿಷ್ಠ ಎಷ್ಟು ಸಮಯದವರೆಗೂ ನೀಡ ಬಹುದು. ಅಮಾನತು ಗೊಂಡವರು ಅರ್ಧದಷ್ಟು ವೇತನ ಪಡೆಯುತ್ತಾರೆ.