ಚನ್ನಪಟ್ಟಣ ಉಪಚುನಾವಣೆ ಅಖಾಡ ರಂಗೇರಿದೆ. ಎನ್ಡಿಎ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ದೊಡ್ಡಗೌಡರ ಕುಟುಂಬ ಅಖಾಡಕ್ಕಿಳಿದಿದೆ. ನಿಖಿಲ್ ಕುಮಾರಸ್ವಾಮಿ, ದೇವೇಗೌಡರು, ಹೆಚ್ ಡಿಕೆ ಪ್ರತ್ಯೇಕವಾಗಿ ಪ್ರಚಾರಕ್ಕೆ ಧುಮುಕಿದ್ದಾರೆ.
ತಿಟ್ಟಮಾರನಹಳ್ಳಿಯಲ್ಲಿ ನಿಖಲ್ ಪರ ಮಾಜಿ ಪ್ರಧಾನಿ ದೇವೇಗೌಡರು ಪ್ರಚಾರ ನಡೆಸುತ್ತಿದ್ದಾರೆ. ಬಾಣಗಳ್ಳಿ ಗ್ರಾಮದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಚಾರ ನಡೆಸುತ್ತಿದ್ದಾರೆ. ಜೊತೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಹೆಚ್ಡಿಕೆ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.