ಕರ್ನಾಟಕ

ಉಡುಪಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ..!

ಆಸ್ಪತ್ರೆಯ ಕಟ್ಟಡದ ನವೀಕರಣ ನಡೆಯುತ್ತಿರುವುದರಿಂದ ಆಸ್ಪತ್ರೆಯಲ್ಲಿ ರೋಗಿಗಳು ಇರಲಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.

ಉಡುಪಿ : ಜಿಲ್ಲೆಯ ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೇಗುಲದ ಬಳಿಯಿರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯ ಕಟ್ಟಡಲ್ಲಿ ಬೆಳ್ಳಂಬೆಳಗ್ಗೆ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಕಟ್ಟಡದ ಮೇಲ್ಭಾಗ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಕಟ್ಟಡದಲ್ಲಿದ್ದ ಇಬ್ಬರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.