ಕರ್ನಾಟಕ

ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಲ್ಲ; ಡಿಕೆಶಿ

ಯಾವುದೇ ಅನುಮಾನ ಬೇಡ. ಮಂಗಳೂರಿನಲ್ಲಿ ಶಕ್ತಿ ಯೋಜನೆ ಘೋಷಣೆ ಮಾಡಿದ್ದು. ಯಾವುದೇ ಗ್ಯಾರಂಟಿ ಸಹ ನಿಲ್ಲುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಗ್ಯಾರಂಟಿಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖಡಕ್ ಆಗಿ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಗ್ಯಾರಂಟಿಗಳನ್ನು ಘೋಷಣೆ ಮಾಡಿ ಜಾರಿಗೊಳಿಸಿದ್ದೇವೆ. ಇದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ಹರಿಯಾಣ, ಮಧ್ಯಪ್ರದೇಶ ಸೇರಿ ಹಲವು ರಾಜ್ಯಗಳ ಚುನಾವಣೆಯಲ್ಲಿ ಇದನ್ನ ಹೇಳಿದ್ರು .ಅವರೇ ಈಗ ಗ್ಯಾರಂಟಿ ಕೊಡುವ ಪರಿಸ್ಥಿತಿಗೆ ಬಂದಿದ್ದಾರೆ. ಹೀಗಾಗಿ ನಮ್ಮ ವಿರುದ್ಧ ಮಾತನಾಡ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಲ್ಲದೇ 5 ವರ್ಷ ಗ್ಯಾರಂಟಿಗಳು ಮುಂದುವರೆಯುತ್ತವೆ. ಇದರಲ್ಲಿ ಯಾವುದೇ ಅನುಮಾನ ಬೇಡ.  ಮಂಗಳೂರಿನಲ್ಲಿ ಶಕ್ತಿ ಯೋಜನೆ ಘೋಷಣೆ ಮಾಡಿದ್ದು. ಯಾವುದೇ ಗ್ಯಾರಂಟಿ ಸಹ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.