ಸ್ಪೆಷಲ್ ಸ್ಟೋರಿ

31 ದಿನಗಳಲ್ಲಿ ರಾಯರ ಹುಂಡಿಗೆ ಭಕ್ತರ ಕಾಣಿಕೆ ಅದೆಷ್ಟು ಕೋಟಿ ಗೊತ್ತಾ..?

ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ 31 ದಿನಗಳಲ್ಲಿ ಭಕ್ತರಿಂದ ಭಾರೀ ಮಟ್ಟದ ಕಾಣಿಕೆ ಸಂಗ್ರಹವಾಗಿದೆ ಎಷ್ಟು ಇಲ್ಲಿದೆ ವಿವರ..

ಕಳೆದ 31 ದಿನಗಳ ಕಾಣಿಕೆ ಹುಂಡಿ ಎಣಿಕೆಕಾರ್ಯ ಮುಕ್ತಾಯಗೊಂಡಿದ್ದು, ಭಕ್ತರಿಂದ 3,92,58,940 ರೂ. ಕಾಣಿಕೆ ಸಂಗ್ರಹವಾಗಿದೆ. ಈ ಬಾರಿ ರಜೆ, ಹಬ್ಬದ ಹಿನ್ನೆಲೆ ಮಂತ್ರಾಲಯ ಮಠಕ್ಕೆ ಕೋಟ್ಯಾಂತರ ರೂಪಾಯಿ ಕಾಣಿಕೆ ಹರಿದು ಬಂದಿದೆ.
ಸಂಗ್ರಹವಾದ ಒಟ್ಟು ಕಾಣಿಕೆಯಲ್ಲಿ 3 ಕೋಟಿ 83 ಲಕ್ಷ 93,760 ರೂ. ಕರೆನ್ಸಿ ನೋಟುಗಳು ಹಾಗೂ 8,65,180 ರೂ. ನಾಣ್ಯಗಳು ಸಂಗ್ರಹವಾಗಿವೆ. ಇನ್ನೂ 174 ಗ್ರಾಂ ಚಿನ್ನ, 1270 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಸೇರಿದೆ. ಕಳೆದ ವರ್ಷ ನವೆಂಬರ್ ತಿಂಗಳ ಕಾಣಿಕೆ ಹುಂಡಿಯಲ್ಲಿ ಒಟ್ಟು 2,86,43,454 ರೂ. ಕಾಣಿಕೆ ಸಂಗ್ರಹವಾಗಿತ್ತು. ಆದ್ರೆ ಈ ಬಾರಿ ಅದನ್ನೂ ಮೀರಿ ಮೂರು ಕೋಟಿ ದಾಟಿದೆ..
ಮಂತ್ರಾಲಯ ಮಠದಲ್ಲಿ ಗುರುವಾರ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಗುರುಪಾದ ಕರಸೇವಕರು ಭಾಗವಹಿಸಿದ್ದರು.