ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದ್ದು, ರೊಚ್ಚಿಗೆದ್ದ ಕುಟುಂಬಸ್ಥರು ಬೆಳಗಾವಿ ಬಿಮ್ಸ್ ಆಸ್ಪತ್ರೆಯ ಹೆರಿಗೆ ವಾರ್ಡ್ ಮುಂದೆ ಬಾಣಂತಿ ಶವವಿಟ್ಟು ಪ್ರತಿಭಟನೆ ನಡೆಸಿ, ತಪ್ಪಿತಸ್ಥ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಮದುರ್ಗ ತಾಲೂಕಿನ ನಾಗನೂರ ತಾಂಡಾದ ಬಾಣಂತಿ ಕಲ್ಪನಾ ಅನಿಲ ಲಮಾಣಿ ಮೃತ ಮಹಿಳೆ. ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆ ಮುಂದೆ ಬಾಣಂತಿ ಕುಟುಂಬಸ್ಥರು ಮತ್ತು ಸಂಬಂಧಿಕರು ಜಮಾಯಿಸಿ ಪ್ರತಿಭಟಿಸಿದರು. ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಸಾವಾಗಿದೆ. ಎರಡು ಬಾರಿ ಸಿಸೇರಿಯನ್ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.