ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದೆ.. ಹೊಸ ಅಧ್ಯಕ್ಷರನ್ನು ಸ್ವಾಗತಿಸಲು ರಾಜಧಾನಿ ವಾಷಿಂಗ್ಟನ್‌ಲ್ಲಿರುವ ಶ್ವೇತಭವನ ಸಿಂಗಾರಗೊಂಡಿದೆ.. ಇಂದು ರಾತ್ರಿ 10-30 ಭಾರತೀಯ ಕಾಲಮಾನ ಪ್ರಕಾರ ಡೊನಾಲ್ಡ್ ಟ್ರಂಪ್ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.. ಜಾಗತಿಕ ರಾಜಕೀಯ ನಾಯಕರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಈ ಭವ್ಯ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್. ಜೈಶಂಕರ್ ಮತ್ತು ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಪತ್ನಿ ನೀತಾ ಅಂಬಾನಿ ಕೂಡ, ಡೊನಾಲ್ಡ್ ಟ್ರಂಪ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.. ಇನ್ನು ಅಮೆರಿಕ ಉಪಾಧ್ಯಕ್ಷರಾಗಿ ಜೆಡಿ ವ್ಯಾನ್ಸ್ ಅವರು ಮೊದಲು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.. ಬಳಿಕ ಡೊನಾಲ್ಡ್ ಟ್ರಂಪ್ ಅವರು ತಮ್ಮ ಉದ್ಘಾಟನಾ ಭಾಷಣವನ್ನು ಮಾಡುತ್ತಾರೆ, ಮುಂದಿನ 4 ವರ್ಷಗಳವರೆಗೆ ತಮ್ಮ ಯೋಜನೆಗಳನ್ನು ಹಾಕುತ್ತಾರೆ.