ಕರ್ನಾಟಕ
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಗಣ ಜನವರಿ 31ರಂದು ತೆರೆಗೆ
ದೇಶದೆಲ್ಲೆಡೆ ಜನವರಿ 26 ಗಣರಾಜ್ಯೋತ್ಸವದ ಸಂಭ್ರಮ. ಇದೇ ಸಂಭ್ರಮದ ಹೊಸ್ತಿಲಲ್ಲಿ ಅಂದರೆ ಜನವರಿ 31ರಂದು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ "ಗಣ" ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ದೇಶದೆಲ್ಲೆಡೆ ಜನವರಿ 26 ಗಣರಾಜ್ಯೋತ್ಸವದ ಸಂಭ್ರಮ. ಇದೇ ಸಂಭ್ರಮದ ಹೊಸ್ತಿಲಲ್ಲಿ ಅಂದರೆ ಜನವರಿ 31ರಂದು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ "ಗಣ" ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಭಿನ್ನ ಕಂಟೆಂಟ್ ಹೊಂದಿರುವ ಈ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ.
ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.
ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು "ಗಣ" ಚಿತ್ರದ ತಾರಾಬಳಗದಲ್ಲಿದ್ದಾರೆ.