ಮೈಸೂರು : ಫೆಂಗಲ್ ಚಂಡಮಾರುತದ ಎಫೆಕ್ಟ್ ಗೆ ರಾಜ್ಯದಲ್ಲೂ ಭಾರಿ ಮಳೆಯಾಗ್ತಿದೆ. ಹಲವು ಜಿಲ್ಲೆಗಳಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ಕೆಲವೆಡೆ ಜಿಟಿಜಿಟಿ ಮಳೆಯಾಗ್ತಿದೆ. ಮೈಸೂರಿನಲ್ಲೂ ಜೋರು ಮಳೆಯಾಗ್ತಿದ್ದು, ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಆದೇಶ ಹೊರಡಿಸಿದ್ದಾರೆ.