ಚಾಮರಾಜನಗರ: ಭಾರಿ ಮಳೆಗೆ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಮೃತರನ್ನ ಅಯ್ಯನಪುರ ಗ್ರಾಮದ ನಿವಾಸಿಗಳಾದ ನಾಗೇಂದ್ರ (48ವ) ಮತ್ತು ಮಲ್ಲೇಶ್ (40ವ)ಎಂದು ಗುರುತಿಸಲಾಗಿದೆ. ಬೈಕ್ ಮೂಲಕ ಅಯ್ಯನಪುರ-ಹಿತ್ತಲಗುಡ್ಡೆ ರಸ್ತೆಯಲ್ಲಿ ತೆರಳುತ್ತಿದ್ದಾಗ, ವಿದ್ಯುತ್ ಕಂಬದ ಕೆಳಭಾಗದಲ್ಲಿ ಜೋತುಕೊಂಡಿದ್ದ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಪೂರ್ವ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಚಸ್ಕಾಂ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.