ಕರ್ನಾಟಕ

ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು

ಆಹಾರ ಅರಸಿ ಗ್ರಾಮಕ್ಕೆ ಬಂದಿದ್ದ 25 ವರ್ಷದ ಕಾಡಾನೆಗೆ, BSNL ಟವರ್ ಬಳಿ ವಿದ್ಯುತ್ ತಂತಿಗೆ ಆನೆಯ ಸೊಂಡಿಲು ತಾಗಿ ಸಾವನ್ನಪ್ಪಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಳಿ ನಡೆದಿದೆ. ಆಹಾರ ಅರಸಿ ಗ್ರಾಮಕ್ಕೆ ಬಂದಿದ್ದ 25 ವರ್ಷದ ಕಾಡಾನೆಗೆ, BSNL ಟವರ್ ಬಳಿ ವಿದ್ಯುತ್ ತಂತಿಗೆ ಆನೆಯ ಸೊಂಡಿಲು ತಾಗಿದೆ. ಇದರಿಂದ ಆನೆ ಮೃತಪಟ್ಟಿದ್ದು ಅರಣ್ಯಾಧಿಕಾರಿಗಳು  ಭೇಟಿ ನೀಡಿ ಪರಿಶೀಲಿಸಿದ್ದಾರೆ.