ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುರಿದೊಡ್ಡಿಯಲ್ಲಿ, ಜ್ಞಾಣೇಶ್ ಎಂಬ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನೀರಿನ ಟ್ಯಾಂಕ್‌ಗೆ ನೇಣು ಬಿಗಿದುಕೊಂಡಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶಿಂಷಾ ಏತ ನೀರಾವರಿ ಯೋಜನೆಯ ಬಾಪೂಜಿ ಕನ್‌ಸ್ಟ್ರಕ್ಷನ್‌ನಲ್ಲಿ ಕೆಲಸ ಮಾಡುತ್ತಿದ್ದ ಜ್ಞಾನೇಶ್, ಹೆಬ್ಬೆರಳು ಏತ ನೀರಾವರಿ ಯೋಜನೆ ಬಳಿಯ ನೀರಿನ ಟ್ಯಾಂಕ್‌ಗೆ ನೇಣು ಬಿಗಿದುಕೊಂಡಿದ್ದಾರೆ. ಸ್ಥಳಕ್ಕೆ ಕೆಸ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.