ರಾಜ್ಯದಲ್ಲಿ ನಡೆಯುವ ಎಲ್ಲಾ ಕೋಮುಗಲಭೆಗಳಿಗೆ ಬಿಜೆಪಿಯೇ ಕಾರಣ ಎಂದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಜನರ ಭಾವನೆ ಕೆರಳಿಸುವುದು ಬಿಜೆಪಿಯವರಿಗೆ ಚೆನ್ನಾಗಿ ಗೊತ್ತಿದೆ. ಜನರ ಬಳಿ ಹೋಗಲು ಅವರಿಗೆ ಹೇಳಿಕೊಳ್ಳುವಂತಹ ಯಾವುದೇ ಸಾಧನೆ ಇಲ್ಲ. ನಮ್ಮ ಸರ್ಕಾರ ಒಳ್ಳೆಯ ಆಡಳಿತ ನೀಡುತ್ತಿರುವುದರಿಂದ, ಹೊಟ್ಟೆಕಿಚ್ಚಿದೆ ಅವರಿಗೆ. ಹೀಗಾಗಿಯೇ ಜಾತಿ, ಧರ್ಮಗಳ ನಡುವೆ ವೈಷಮ್ಯದ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.