ವೈರಲ್

ಕೌಟುಂಬಿಕ ಕಲಹ : ಮಕ್ಕಳೊಂದಿಗೆ ಕೆರೆಗೆ ಬಿದ್ದು ತಾಯಿ ಆತ್ಮಹತ್ಯೆ

ಹಸೀನಾ ತಾಜ್ ಎಂಬ ಮಹಿಳೆ ಗಂಡ ಹಾಗೂ ಇಬ್ಬರು ಮಕ್ಕಳ ಜೊತೆ ಮಧುಗಿರಿ ಪಟ್ಟಣದಲ್ಲಿ ವಾಸವಾಗಿದ್ದರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಇಂದು ಮಧುಗಿರಿ ಬಳಿಯಿರುವ ಸಿದ್ದಪುರ ಕೆರೆಗೆ ತನ್ನ ಇಬ್ಬರು ಮಕ್ಕಳ ಜೊತೆ ಕೆರೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತುಮಕೂರು : ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿಯೊಬ್ಬರು ಇಬ್ಬರು ಮಕ್ಕಳ ಜೊತೆ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಮಧುಗಿರಿ ತಾಲೂಕಿನ ಸಿದ್ದಪುರದಲ್ಲಿ ನಡೆದಿದೆ. ತಾಯಿ ಹಸೀನಾ ತಾಜ್ (35), ಮಕ್ಕಳಾದ ಅಫೀಜ್ (8), ಅಲ್ಕೀಜ್ (4), ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೌದು, ಹಸೀನಾ ತಾಜ್ ಎಂಬ ಮಹಿಳೆ ಗಂಡ ಹಾಗೂ ಇಬ್ಬರು ಮಕ್ಕಳ ಜೊತೆ ಮಧುಗಿರಿ ಪಟ್ಟಣದಲ್ಲಿ ವಾಸವಾಗಿದ್ದರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಇಂದು ಮಧುಗಿರಿ ಬಳಿಯಿರುವ ಸಿದ್ದಪುರ ಕೆರೆಗೆ ತನ್ನ ಇಬ್ಬರು ಮಕ್ಕಳ ಜೊತೆ ಕೆರೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಂಡನ ಕಿರುಕುಳಕ್ಕೆ ಬೇಸತ್ತು ಹಸೀನಾ ತಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದ್ದು, ಘಟನೆ ಸಂಬಂಧ ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.