ಕರ್ನಾಟಕ

ವಿದ್ಯುತ್ ಶಾಕ್​​​​ನಿಂದ ರೈತ & ಜಾನುವಾರು ಸಾವು..!

ವಿದ್ಯುತ್ ಶಾಕ್​ ನಿಂದ ರೈತ ಹಾಗೂ ಜಾನುವಾರು ಸಾವನ್ನಪ್ಪಿರುವ ಘಟನೆ, ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ.

ವಿದ್ಯುತ್ ಶಾಕ್ ನಿಂದ ರೈತ ಹಾಗೂ ಜಾನುವಾರು ಸಾವನ್ನಪ್ಪಿರುವ ಘಟನೆ,  ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಶೇಖರ್ ಮೃತ ದುರ್ದೈವಿ ಎನ್ನಲಾಗಿದೆ. 

ನಿನ್ನೆ ರಾತ್ರಿ ಜಮೀನಿನಿಂದ ಎತ್ತುಗಳನ್ನು ಮೇಯಿಸಿ ಮನೆಗೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಒಂದು ಹಸು ಹಾಗೂ ರೈತ ಶೇಖರ್ ಸ್ಥಳದಲ್ಲೇ ಸಾವವನ್ನಪ್ಪಿದ್ದಾರೆ. ಘಟನೆಗೆ ಚೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ ಹೊರಿಸಿದ್ದಾರೆ. ತಂತಿ ಬದಲಿಸುವಂತೆ ದೂರು ನೀಡಿದ್ದರೂ ಕ್ರಮ ಕೈಗೊಳ್ಳದ ಹಿನ್ನೆಲೆ, ಅವಘಡ ಸಂಭವಿಸಿದೆ ಎನ್ನಲಾಗ್ತಿದೆ.