ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯಲ್ಲಿ, ಎತ್ತಿನಹೊಳೆ ಬಪರ್ ಡ್ಯಾಂ ನಿರ್ಮಾಣಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಬೈರಗೊಂಡ್ಲು ಸಮೀಪವಿರುವ ಬಪರ್ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ಸ್ಥಳ ಗುರುತು ಮಾಡಿತ್ತು. ಬಪರ್ ಡ್ಯಾಂ ನಿರ್ಮಾಣದಿಂದ ಕೋಳಾಲ ಹೋಬಳಿಯ 12 ಗ್ರಾಮಗಳ ರೈತರಿಗೆ ಸಂಕಷ್ಟ ಎದುರಾಗುವ ಭೀತಿಯಿಂದ, ಜಮೀನು ಕಳೆದುಕೊಳ್ಳುವ ಭೀತಿಯಿಂದ ರೈತರು ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಡ್ಯಾಂ ನಿರ್ಮಾಣ ಮಾಡದಂತೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ಗೆ ಸ್ಥಳೀಯ ರೈತರು ಮನವಿ ಸಲ್ಲಿಸಿದ್ದಾರೆ. ಹಿಂದೆ ಭೈರಗೊಂಡ್ಲು ಬಿಟ್ಟು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡ್ಯಾಂ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಇದೀಗ ಮತ್ತೆ ಭೈರಗೊಂಡ್ಲುವಿನಲ್ಲಿ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಆದರೆ ಇದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ.