ಬೆಳಗಾವಿ : ಮದ್ಯ ಸೇವನೆಗೆ ಹಣ ಕೊಡಲಿಲ್ಲವೆಂದು ಅಪ್ಪನನ್ನೇ ಮಾರಣಾಂತಿಕ ಹಲ್ಲೆ ಮಾಡಿ, ಪಾಪಿ ಮಗನೊಬ್ಬ ಕೊಲೆ ಮಾಡಿದ ಘಟನೆಯೊಂದು ನಡೆದಿದೆ. ಅಥಣಿ ತಾಲೂಕಿನ ಮದಬಾವಿ ಗ್ರಾಮದ ಮಲ್ಲು ತುಕಾರಾಮ ವನಖಂಡೆ (89) ಅವರನ್ನು ಹತ್ಯೆಯಾಗಿದೆ. ಸದ್ಯ, ಮಗ ಬಾಳಾಸಾಬ ಮಲ್ಲು ವನಖಂಡೆಯನ್ನು (49) ಪೊಲೀಸರು ಬಂಧಿಸಿದ್ದಾರೆ.
ಹೌದು, ಮಗನ ಚಟಕ್ಕೆ ತಂದೆ ಬಲಿಯಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಂದೆ ತುಕಾರಾಮ ಅವರನ್ನು ಮಹಾರಾಷ್ಟ್ರದ ಮೀರಜ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.