ಬೀದರ್ : ಬಸವಕಲ್ಯಾಣದ ಬಜೆಪಿ ಶಾಸಕ ಶರಣು ಸಲಗರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇನ್ನೇನು ಕೆಲವೇ ಗಂಟೆಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಅಚ್ಚರಿಯ ಹೇಳಿಕೆಯೊಂದು ನೀಡಿದ್ದಾರೆ. ಈ ಮೂಲಕ ರಾಜ್ಯ ರಾಜಕೀಯದ ಹೊಸ ಬಾಂಬ್ ಸಿಡಿಸಿದ್ದಾರೆ.
ಇದೇ ವೇಳೆ ಬೀದರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮೆಲ್ಲರ ನಿರೀಕ್ಷೆಯಂತೆ ಇನ್ನೇನು ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಲಿದ್ದಾರೆ. ಕಾಂಗ್ರೆಸ್ ಸರ್ಕಾರ ಒಂದು ನಿರ್ದಿಷ್ಟ ಸಮುದಾಯವನ್ನು ಒಲೈಕೆ ಮಾಡ್ತಾ ಇದೆ. ಮುಸ್ಲಿಂ ಸಮುದಾಯಕ್ಕಾಗಿ ಮಾತ್ರ ಕಾಂಗ್ರೆಸ್ ಸರ್ಕಾರ ಇದೆ ಎಂದು ಹೇಳಿದ್ದಾರೆ.
ಬೀದರ್ ನ ಬಸವಕಲ್ಯಾಣದ ಯುವತಿ ಹತ್ಯೆ ಮನಕಲುಕುವ ಘಟನೆಯೊಂದು ನಡೆದಿದ್ದು, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅನೇಕ ಹಗರಣಗಳು ಬೆಳಕಿಗೆ ಬರುತ್ತಿವೆ. ನಾಗಮಂಗಲದ ದುರಂತವನ್ನು ನೋಡಿದ್ರೆ ಈ ಸರ್ಕಾರ ಕೇವಲ ಮುಸಲ್ಮಾನರಿಗಾಗಿ ಇದೆ ಏನೋ ಎಂಬ ಅನುಮಾನ ಬರಲು ಆರಂಭವಾಗಿದೆ. ಇನ್ನೇನು ಸಿಎಂ ಸಿದ್ದರಾಮಯ್ಯ ಕೂಡಾ ಕೆಲವೇ ಗಂಟೆಗಳಲ್ಲಿ ರಾಜೀನಾಮೆ ನೀಡ್ತಾರೆ ಎಂದು ಕಾಂಗ್ರೆಸ್ ವಿರುದ್ದ ಬಿಜೆಪಿ ನಾಯಕರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಆಕ್ರೋಶ ಹೊರಹಾಕಿದರು