ಕರ್ನಾಟಕ

ಒಕ್ಕಲಿಗ ಸಮುದಾಯದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್ಐಆರ್

ಒಕ್ಕಲಿಗ ಸಮುದಾಯದ ಚಂದ್ರಶೇಖರ ಸ್ವಾಮೀಜಿಗೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಬೆಂಗಳೂರು: ಒಕ್ಕಲಿಗ ಸಮುದಾಯದ ಚಂದ್ರಶೇಖರ ಸ್ವಾಮೀಜಿಗೆ  ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ಡಿಸೆಂಬರ್ 2 ರಂದು ಪೊಲೀಸ್ ಠಾಣೆಗೆ ಖುದ್ದು ಹಾಜರಾಗುವಂತೆ ನೊಟೀಸ್‌ನಲ್ಲಿ ಸ್ವಾಮೀಜಿಗೆ ಸೂಚನೆ ನೀಡಲಾಗಿದೆ. ಇದೇ ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಕ್ಫ್ ವಿರುದ್ಧದ ಹೋರಾಟದ ವೇಳೆ ಚಂದ್ರಶೇಖರ್ ಸ್ವಾಮೀಜಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಅಂತ ವಿವಾದಾತ್ಮಕ ಹೇಳಿಕೆ ನೀಡಿದ್ದರು.