ಕರ್ನಾಟಕ

ಸಿಎಂ ವಿರುದ್ಧ ದೂರು ಕೊಟ್ಟ ಸ್ನೇಹಮಯಿ ಕೃಷ್ಣ ಮೇಲೆ ಎಫ್​​​​ಐಆರ್..!

ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಮುಡಾ ಹಗರಣದಲ್ಲಿ  ಸಿಎಂ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಮೇಲೆ ಎಫ್‌ಐಆರ್‌ ದಾಖಲಾಗಿದೆ.. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕೇಸಲ್ಲಿ ಸುಳ್ಳು ಸಾಕ್ಷ್ಯ ಸೃಷ್ಟಿಸುತ್ತಿದ್ದಾರೆಂದು ಕಾಂಗ್ರೆಸ್‌ ನಾಯಕ ಎಂ. ಲಕ್ಷ್ಮಣ್‌ ನೀಡಿದ್ದ ದೂರಿನ ಮೇಲೆ ಮೈಸೂರಿನ ದೇವರಾಜ ಠಾಣೆಯಲ್ಲಿ FIR ದಾಖಲಾಗಿದೆ.. ಸಿಎಂ ಪತ್ನಿ ಪಾರ್ವತಿ ಮುಡಾದಿಂದ ಪಡೆದ ನಿವೇಶನದ ಕ್ರಯಪತ್ರದ ಮುದ್ರಾಂಕ ಶುಲ್ಕದ ಬಗ್ಗೆ ಸ್ನೇಹಮಯಿ ಕೃಷ್ಣ ಆಕ್ಷೇಪ ವ್ಯಕ್ತಪಡಿಸಿದ್ದರು, ಈ ಸಂಬಂಧ ಕಾಂಗ್ರೆಸ್‌ ನಾಯಕರು ದೂರು ನೀಡಿದ ಹಿನ್ನೆಲೆ ಇದೀಗ ಎಫ್‌ಐಆರ್‌ ದಾಖಲಾಗಿದೆ..