ಬಾಗಲಕೋಟೆ : ಗಣೇಶ ಮೆರವಣಿಗೆಯ ವೇಳೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಧೋಳ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಹೌದು, ನಿನ್ನೆ ಮುಧೋಳ ಪಟ್ಟಣದ ಜನ್ನತ್ ನಗರದ ಗಣೇಶ ಮೂರ್ತಿ ವಿಸರ್ಜನೆ ವೇಳೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಟಿಪ್ಪು ಸುಲ್ತಾನ್, ಔರಂಗಾಜೇಬ್ ಕುರಿತಂತೆ ಅಶ್ಲೀಲ ಪದ ಬಳಕೆ ಮಾಡಿ, ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಕುರಿತು ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಬಾಗಲಕೋಟೆ ಜಿಲ್ಲೆಯ ಮುಧೋಳ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಈಗ ಪ್ರಚೋದನಕಾರಿ ಭಾಷಣೆ ಮಾಡಿದ್ದಂತ ಅವರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.