ತುಮಕೂರು : ಇತ್ತೀಚಿಗೆ ಎಲೆಕ್ಟ್ರಿಕ್ ಶೋರೂಂಗಳಲ್ಲಿ ಬೆಂಕಿ ಅವಘಡಗಳ ಸಂಖ್ಯೆ ಹೆಚಾಗ್ತಿದೆ. ಇದೀಗ ಇಂತಹದ್ದೇ ಒಂದು ತುಮಕೂರಿನಲ್ಲಿ ನಡೆದಿದೆ. ಇಲ್ಲಿನ ತುರುವೇಕೆರೆ ಪಟ್ಟಣದ ಜೆಮೊಪೈ ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಬೆಂಕಿ ಕೆನ್ನಾಲಿಗೆಗೆ ಎರಡು ಎಲೆಕ್ಟ್ರಿಕ್ ಬೈಕ್ ಗಳು ಸುಟ್ಟು ಭಸ್ಮವಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಶೋರೂಂ ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ತುರುವೇಕೆರೆ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ