ದೇಶ

ಕಾಲ್ತುಳಿತ ಪ್ರಕರಣ ಬೆನ್ನಲ್ಲೇ ತಿರುಪತಿಯಲ್ಲಿ ಮತ್ತೊಂದು ಅವಘಡ

ಲಡ್ಡು ವಿತರಣೆ ಕೊಠಡಿಯಲ್ಲಿದ್ದ ಕಂಪ್ಯೂಟರ್‌ಗಳಿಗೆ ಸಂಪರ್ಕ ಕಲ್ಪಿಸಿದ್ದ ವೈಯರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.. ಸದ್ಯ ಬೆಂಕಿ ನಿಯಂತ್ರಣಕ್ಕೆ ತರಲಾಗಿದೆ..

ತಿರುಪತಿ ಕಾಲ್ತುಳಿತ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ.. ತಿರುಮಲ ಲಡ್ಡು ಕೌಂಟರ್‌ಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ.  ಈ ಘಟನೆ ತಿಮ್ಮಪ್ಪನ ಪ್ರಸಾದವನ್ನು ಪಡೆಯುತ್ತಿದ್ದ ಭಕ್ತರಲ್ಲಿ ಭಯ ಹುಟ್ಟಿಸಿದೆ.. ಸಂಕ್ರಾಂತಿ ಒಂದು ದಿನ ಪೂರ್ವದಲ್ಲೇ ಆಂಧ್ರ ಪ್ರದೇಶದ ತಿರುಪತಿ ದೇವಸ್ಥಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ.. ಮೂಲಗಳ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೌಂಟರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ.. ಲಡ್ಡು ವಿತರಣೆ ಕೊಠಡಿಯಲ್ಲಿದ್ದ ಕಂಪ್ಯೂಟರ್‌ಗಳಿಗೆ ಸಂಪರ್ಕ ಕಲ್ಪಿಸಿದ್ದ ವೈಯರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.. ಸದ್ಯ ಬೆಂಕಿ ನಿಯಂತ್ರಣಕ್ಕೆ ತರಲಾಗಿದೆ.. ಜನವರಿ 8ರಂದು ತಿರುಪತಿ ವೈಕುಂಠ ದ್ವಾರ ದರ್ಶನ ಟಿಕೆಟ್ ವಿತರಣಾ ಕೇಂದ್ರದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತದ ಕೆಲವೇ ದಿನಗಳ ನಂತರ ಈ ಘಟನೆ ಸಂಭವಿಸಿದೆ..