ಕರ್ನಾಟಕ
ಎಟಿಎಂಗೆ ಹಣ ಹಾಕಲು ಬಂದಿದ್ದ ಸಿಬ್ಬಂದಿ ಮೇಲೆ ಫೈರಿಂಗ್..ಓರ್ವ ಸಾವು..!
ಬೀದರ್‌ನಲ್ಲಿ ಎಟಿಎಂಗೆ ಹಣ ಹಾಕಲು ಬಂದಿದ್ದ ಸಿಬ್ಬಂದಿ ಮೇಲೆ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.
ಬೀದರ್‌ನಲ್ಲಿ ಎಟಿಎಂಗೆ ಹಣ ಹಾಕಲು ಬಂದಿದ್ದ ಸಿಬ್ಬಂದಿ ಮೇಲೆ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.. ಘಟನೆಯಲ್ಲಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಚಿಕಿತ್ಸೆ ಫಲಕಾರಿಯಾಗೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.. ಹಾಡಹಗಲೇ 5 ಸುತ್ತಿನ ಗುಂಡಿನ ದಾಳಿ ನಡೆದ ಬಳಿಕ ವ್ಯಾನ್‌ನಲ್ಲಿದ್ದ ಹಣ ಬಾಕ್ಸ್ ತೆಗೆದುಕೊಂಡು ಖದೀಮರು ಎಸ್ಕೇಪ್ ಆಗಿದ್ದಾರೆ.. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಭಯಾನಕ ದರೋಡೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದುಷ್ಕರ್ಮಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ