ಕರ್ನಾಟಕ

250 ಅಡಿ ಪ್ರಪಾತಕ್ಕೆ ಬಿದ್ದ ಕಾರು..ಐವರಿಗೆ ಗಂಭೀರ ಗಾಯ..!

ಪ್ರಪಾತಕ್ಕೆ ಬಿದ್ದ ಕಾರಿನಲ್ಲಿದ್ದ ಐವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಪ್ರವಾಸಿಗರಿದ್ದ ಕಾರೊಂದು 250 ಅಡಿ ಪ್ರಪಾತಕ್ಕೆ ಬಿದ್ದಿರುವ ಘಟನೆ, ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ತಿರುವಿನಲ್ಲಿ ನಡೆದಿದೆ. ಕಾರಿನಲ್ಲಿದ್ದ ಐವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.