ಕರ್ನಾಟಕ

ಬೈಕ್​​ ಗೆ ಗುದ್ದಿ ಫ್ಲೈ ಓವರ್​ ನಿಂದ ಕೆಳಗೆ ಬಿದ್ದ ಕಾರು; ಐವರಿಗೆ ಗಂಭೀರ ಗಾಯ.. ಇಬ್ಬರ ಸ್ಥಿತಿ ಗಂಭೀರ

ಚಲಿಸುತ್ತಿದ್ದ ಬೈಕ್ ಗೆ ಗುದ್ದಿದ ಕಾರು ಪ್ಲೈ ಓವರ್ ನಿಂದ ಕೆಳಗೆ ಬಿದ್ದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಹಾಗೂ ಬೈಕ್​ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಯಶವಂತಪುರ ಸರ್ಕಲ್ ಬಳಿ ಸಂಭವಿಸಿದೆ. 

ಮುಂಜಾನೆ 3.45ರ ಸುಮಾರಿಗೆ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ಬೈಕ್ ಗೆ ಗುದ್ದಿದ ಕಾರು ಪ್ಲೈ ಓವರ್ ನಿಂದ ಕೆಳಗೆ ಬಿದ್ದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಹಾಗೂ ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನ ಸ್ಥಳೀಯರ ಸಹಾಯದಿಂದ ಪೊಲೀಸರು ಆಸ್ಪತ್ರಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಐವರು ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  

ಸ್ಯಾಂಕಿ ರಸ್ತೆಯಿಂದ ತುಮಕೂರು ಮಾರ್ಗವಾಗಿ ತೆರಳುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಫ್ಲೈಓವರ್ ಮೇಲೆ ಡಿವೈಡರ್ ನಿಂದ ಹಾರಿ ಕೆಳಗೆ ಬಿದ್ದಿದೆ. ತಮಿಳುನಾಡು ನೋಂದಣಿ TN37 DH9484 ಸಂಖ್ಯೆಯ ಕಾರು ಇದಾಗಿದ್ದು, ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.