ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಈ ಬಾರಿ ಫಲಪುಷ್ಪ ವೀಕ್ಷಣೆಗೆ 8 ರಿಂದ 10 ಲಕ್ಷ ಜನ ಆಗಮಿಸುವ ನಿರೀಕ್ಷೆ ಇದ್ದು, ಸಂಚಾರಿ ಪೊಲೀಸರಿಗೆ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕರ ವಾಹನಗಳ ನಿಲುಗಡೆಗೆ ಒಂದಷ್ಟು ಸ್ಥಳಗಳನ್ನು ಗುರುತು ಮಾಡಿ ಅವಕಾಶ ಕಲ್ಪಿಸಲಾಗಿದೆ.
ವಾಹನ ನಿಲುಗಡೆಗೆ ಅವಕಾಶ ನೀಡಲಾಗಿರುವ ಸ್ಥಳಗಳು:
ಡಾ.ಮರಿಗೌಡ ರಸ್ತೆ, ಅಲ್ ಅಮೀನ್ ಕಾಲೇಜ್ ಆವರಣದಲ್ಲಿ ದ್ವಿಚಕ್ರ ವಾಹನಗಳಿಗೆ ಅವಕಾಶ
ಕೆ.ಹೆಚ್.ರಸ್ತೆ, ಶಾಂತಿನಗರ BMTC ಬಸ್ ನಿಲ್ದಾಣದ ಮೇಲೆ 4 ಚಕ್ರದ ವಾಹನಗಳಿಗೆ ಅವಕಾಶ
ಡಾ.ಮರಿಗೌಡ ರಸ್ತೆ, ಹಾಪ್ ಕಾಮ್ಸ್ ನಲ್ಲಿ ದ್ವಿಚಕ್ರ ಹಾಗೂ 4 ಚಕ್ರದ ವಾಹನಗಳಿಗೆ ಅವಕಾಶ
ಜೆ.ಸಿ.ರಸ್ತೆ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿಚಕ್ರ ಹಾಗೂ ಕಾರುಗಳ ನಿಲುಗಡೆಗೆ ಅವಕಾಶ
ವಾಹನಗಳ ನಿಲುಗಡೆ ನಿಷೇಧಿಸಿರುವ ರಸ್ತೆಗಳು ಯಾವುದು?
ಡಾ.ಮರಿಗೌಡ ರಸ್ತೆ, ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ ವರೆಗೆ ರಸ್ತೆಯ ಎರಡೂ ಬದಿ
ಕೆ.ಹೆಚ್.ರಸ್ತೆ, ಕೆ.ಹೆಚ್.ವೃತ್ತದಿಂದ ಶಾಂತಿನಗರ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿ
ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರದವರೆಗೆ ನಿಷೇಧ
ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್ ನಿಂದ ವಿಲ್ಸನ್ ಗಾರ್ಡನ್ 12 ನೇ ಕ್ರಾಸ್ ವರೆಗೆ
ಬಿಟಿಎಸ್ ಬಸ್ ಸ್ಟಾಪ್ ಬಿಎಂಟಿಸಿ ಜಂಕ್ಷನ್ ನಿಂದ ಪೋಸ್ಟ್ ಆಫೀಸ್ ರಸ್ತೆಯ ಎರಡೂ ಬದಿ
ಕೃಂಬಿಗಲ್ ರಸ್ತೆಯ ಎರಡೂ ಕಡೆಗಳಲ್ಲಿ ವಾಹನ ನಿಲುಗಡೆ ನಿಷೇಧ
ಲಾಲ್‌ಬಾಗ್ ವೆಸ್ಟ್‌ಗೇಟ್‌ನಿಂದ ಆರ್.ವಿ. ಟೀಚರ್ಸ್ ಕಾಲೇಜ್‌ವರೆಗೆ ನಿಷೇಧ
ಆರ್.ವಿ ಟೀಚರ್ಸ್ ಕಾಲೇಜ್‌ನಿಂದ ಅಶೋಕ ಪಿಲ್ಲರ್ ವರೆಗೆ ನಿಷೇಧ
ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್ ವರೆಗೆ ವಾಹನ ನಿಲುಗಡೆ ನಿಷೇಧ