ವೈರಲ್

ಜಾನಪದ ಕಲಾವಿದ ಗುರುರಾಜ ಹೊಸಕೋಟೆ ಕಾರು ಅಪಘಾತ

ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬೇರೆ ವಾಹನ ತಪ್ಪಿಸಲು ಹೋಗಿ ರಸ್ತೆ ಪಕ್ಕದಲ್ಲಿದ್ದ ಕಲ್ಲಿಗೆ ಇವರ ಕಾರು ಡಿಕ್ಕಿ ಹೊಡೆದಿದೆ. ಸಿಂಧನೂರಿನಿಂದ ಮಹಾಲಿಂಗಪುರಕ್ಕೆ ಹೊರಟಿದ್ದ ಸಂದರ್ಭ ಅಪಘಾತ ಸಂಭವಿಸಿದೆ.

 ಬಾಗಲಕೋಟೆ : ಕರ್ನಾಟಕ ಜನಪದ ಗಾಯಕ, ಚಿತ್ರ ನಟ ಗುರುರಾಜ ಹೊಸಕೋಟೆ ಅವರ ಕಾರು ಬಾಗಲಕೋಟೆ ‌ಜಿಲ್ಲೆ ಮುಧೋಳ ತಾಲ್ಲೂಕಿನ ಸೋರಗಾವಿಯಲ್ಲಿ ಅಪಘಾತ ಸಂಭವಿಸಿದೆ. ಕಾರು ಅಪಘಾತದಲ್ಲಿ ಗುರುರಾಜ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

Gururaj Hoskote: ಜನಪದ ಕಲಾವಿದ, ನಟ ಗುರುರಾಜ ಹೊಸಕೋಟೆ ಕಾರು ಭೀಕರ ಅಪಘಾತ |Gururaj  Hosakote Car accident In Bagalakote Mudhol Soragavi – News18 ಕನ್ನಡ

ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬೇರೆ ವಾಹನ ತಪ್ಪಿಸಲು ಹೋಗಿ ರಸ್ತೆ ಪಕ್ಕದಲ್ಲಿದ್ದ ಕಲ್ಲಿಗೆ ಇವರ ಕಾರು ಡಿಕ್ಕಿ ಹೊಡೆದಿದೆ. ಸಿಂಧನೂರಿನಿಂದ ಮಹಾಲಿಂಗಪುರಕ್ಕೆ ಹೊರಟಿದ್ದ ಸಂದರ್ಭ ಅಪಘಾತ ಸಂಭವಿಸಿದೆ.

ಗುರುರಾಜ ಹೊಸಕೋಟೆ ಅವರು ಜಾನಪದ ಕಲಾವಿದರಾಗಿದ್ದು, ತಂದೆಯಿಂದ ಬಂದ ಸಂಗೀತ ಬಳುವಳಿಯಿಂದ ಜನಪದ ಹಾಡುಗಾರಿಕೆಯಲ್ಲಿ ಪರಿಣಿತಿ ಪಡೆದರು. ಜನಪದ ಶೈಲಿಯ ಸಮೂಹ ಗೀತೆಗಳನ್ನು ರಚಿಸಿ ಮಾಡುತ್ತಿದ್ದ ನೃತ್ಯ, ಹಾಡಿನ ಸಂಯೋಜನೆ, ಜನಪದ ಶೈಲಿಯ ಹಾಡುಗಳ ರಚನೆ ಮತ್ತು ಹಾಡುಗಾರಿಕೆಯಿಂದ ಖ್ಯಾತಿ ಪಡೆದಿದ್ದಾರು.