ಢಾಕಾ: ನೆರೆ ರಾಷ್ಟ್ರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ದಾಳಿಗಳು ಹೆಚ್ಚುತ್ತಿರುವ ಬೆನ್ನಲ್ಲೇ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಬಾಂಗ್ಲಾಗೆ ಭೇಟಿ ನೀಡಿದ್ದಾರೆ.
ಸೋಮವಾರ ಬೆಳಗ್ಗೆ ಢಾಕಾಗೆ ಆಗಮಿಸಿದ ವಿಕ್ರಮ್ ಮಿಸ್ರಿ ಬಾಂಗ್ಲಾದ ಮಧ್ಯಂತರ ಸರ್ಕಾರದ ವಿದೇಶಾಂಗ ಕಾರ್ಯದರ್ಶಿ ಮೊಹಮ್ಮದ್ ಜಶಿಮ್ ಉದ್ದಿನ್ ಮತ್ತು ವಿದೇಶಾಂಗ ಸಚಿವ ಮೊಹಮ್ಮದ್ ತೌಶಿದ್ ಹೌಸೇನ್ ರನ್ನು ಭೇಟಿ ಮಾಡಿದರು. ಭೇಟಿಯ ವೇಳೆ ಹಿಂದೂಗಳ ವಿರುದ್ಧ ನಡೆಯುತ್ತಿರುವ ದಾಳಿಗಳು, ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಸೇರಿ ಇತರೆ ಹಿಂದೂ ಸನ್ಯಾಸಿಗಳ ಬಂಧನದ ಕುರಿತು ಚರ್ಚೆ ನಡೆದಿದೆ ಎನ್ನಲಾಗ್ತಿದೆ.
ಡಿಸೆಂಬರ್ 4 ರಂದು ಸಭೆ ಕುರಿತು ಮಾಹಿತಿ ನೀಡಿದ್ದ ಬಾಂಗ್ಲಾದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಶಫೀಕುಲ್ ಆಲಂ ಎರಡೂ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳು ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧ ವೃದ‍್ಧಿ ಹಾಗೂ ಎರಡೂ ದೇಶಗಳ ನಡುವಿನ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದ್ದರು.
Bangladesh | Foreign Secretary Vikram Misri received by his Bangladeshi counterpart Md. Jashim Uddin, in Dhaka
(Pics Source - Bangladesh MoFA) pic.twitter.com/8TRdNRsSRb
ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರ ಪತನವಾಗ ಬಳಿಕ ಇದೇ ಮೊದಲ ಬಾರಿಗೆ ಭಾರತದ ರಾಜತಾಂತ್ರಿಕ ಅಧಿಕಾರಿಯೊಬ್ಬರು ಬಾಂಗ್ಲಾಗೆ ಭೇಟಿ ನೀಡಿ ಮಧ್ಯಂತರ ಸರ್ಕಾರದೊಂದಿಗೆ ಸಭೆ ನಡೆಸುತ್ತಿದ್ದಾರೆ. ಮಧ್ಯಂತರ ಸರ್ಕಾರ ರಚನೆಯಾದ ಬಳಿಕ ನ್ಯೂಯಾರ್ಕ್ ನಲ್ಲಿ ವಿಶ್ವಸಂಸ್ಥೆಯ ಸಭೆಯಲ್ಲಿ ವಿದೇಶಾಂಗ ಸಚಿವ ಜೈಶಂಕರ್ ರೊಂದಿಗೆ ಬಾಂಗ್ಲಾ ವಿದೇಶಾಂಗ ಸಚಿವ ಮೊಹಮ್ಮದ್ ತೌಶಿದ್ ಹೌಸೇನ್ ಮಾತುಕತೆ ನಡೆಸಿದ್ದರು.