ಕರ್ನಾಟಕ

ಕಲಬುರಗಿಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನ ಗುಂಡಿಕ್ಕಿ ಕೊಲೆ.!

ತೀವ್ರ ರಕ್ತಸ್ರಾವವಾಗಿ ವಿಶ್ವನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಶ್ವನಾಥ್ ಅವರ ತೆಲೆಗೆ ಮೂರು ಗುಂಡು ತಗುಲಿದೆ. ನಿರ್ಜನ ಪ್ರದೇಶದಲ್ಲಿ ಕೊಂದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ವಿಶ್ವಾನಥ್ ಮೃತದೇಹ ಕಂಡ ದಾರಿಹೋಕರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಕೂಡಲೇ ಆಳಂದ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ.

ಕಲಬುರಗಿ : ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಜಿಡಗಾ ಕ್ರಾಸ್ ಬಳಿ ನಡೆದಿದೆ. ಗ್ರಾಮದ ವಿಶ್ವನಾಥ್ ಜಮಾದಾರ್ ಕೊಲೆಯಾಗಿದ್ದವರು. ವಿಶ್ವನಾಥ್ ಜಮಾದಾರ್ ಶುಕ್ರವಾರ ಬೆಳಿಗ್ಗೆ ಮಗನನ್ನು ಶಾಲೆಗೆ ಬಿಟ್ಟು ಬರುತ್ತೇನೆ ಅಂತ ಬೈಕ್ ಮೇಲೆ ಹೋಗಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ವಿಶ್ವನಾಥ್ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.

ಕಲಬುರಗಿ: ಗ್ರಾಮ ಪಂಚಾಯತಿ ಮಾಜಿ ಸದಸ್ಯನ ತಲೆಗೆ 3 ಗುಂಡು ಹೊಡೆದು ಬರ್ಬರ ಹತ್ಯೆ

ತೀವ್ರ ರಕ್ತಸ್ರಾವವಾಗಿ ವಿಶ್ವನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಶ್ವನಾಥ್ ಅವರ ತೆಲೆಗೆ ಮೂರು ಗುಂಡು ತಗುಲಿದೆ. ನಿರ್ಜನ ಪ್ರದೇಶದಲ್ಲಿ ಕೊಂದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ವಿಶ್ವಾನಥ್ ಮೃತದೇಹ ಕಂಡ ದಾರಿಹೋಕರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಕೂಡಲೇ ಆಳಂದ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ.

ಇನ್ನು, ವಿಚಾರ ತಿಳಿಯುತ್ತಿದ್ದಂತೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಕೂಡ ಸ್ಥಳಕ್ಕೆ ನೀಡಿ ಪರೀಶಿಲನೆ ನಡೆಸಿದರು. ವಿಚಾರ ತಿಳಿದ ವಿಶ್ವನಾಥ್ ಕುಟುಂಬಸ್ಥರು ಸ್ಥಳಕ್ಕೆ ತೆರಳಿದರು. ಮೃತದೇಹದ ಮುಂದೆ ಗೋಳಾಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.