ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಬರೋಬ್ಬರಿ 14 ವರ್ಷಗಳ ಜೈಲು ಶಿಕ್ಷೆ ವಿಧಿಸಿ ರಾವಲ್ಪಿಂಡಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಅಷ್ಟೇ ಅಲ್ಲ ಇದೇ ಕೇಸಲ್ಲಿ ಇಮ್ರಾನ್ ಪತ್ನಿಯೂ 7 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಇಮ್ರಾನ್ ಖಾನ್ ಪಾಕಿಸ್ತಾನದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಪಂಜಾಬ್ ಪ್ರಾಂತ್ಯದ ಅಲ್ ಖಾದಿರ್ ವಿಶ್ವವಿದ್ಯಾಲಯಕ್ಕಾಗಿ 458 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಇಮ್ರಾನ್ ಖಾನ್ ಪತ್ನಿ ಬೀಬಿ, ಅಲ್-ಖಾದಿರ್ ವಿವಿಯ ಟ್ರಸ್ಟಿಯಾಗಿದ್ದು ಈ ಭೂಮಿಯನ್ನ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಂದ ನೀಡಿರುವ ಗಂಭೀರ ಆರೋಪ ಕೇಳಿ ಬಂದಿತ್ತು. ಇದೀಗ ಈ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ ಜೈಲು ಶಿಕ್ಷೆ ವಿಧಿಸಿ ಪಾಕ್ ನ್ಯಾಯಾಲಯ ಆದೇಶ ಹೊರಡಿಸಿದೆ. ಆಗಸ್ಟ್ 2023ರಿಂದ ಜೈಲಿನಲ್ಲಿರುವ ಇಮ್ರಾನ್ ಖಾನ್ ಇದೀಗ ಅಲ್-ಖಾದಿರ್ ಟ್ರಸ್ಟ್ ಭ್ರಷ್ಟಾಚಾರ ಪ್ರಕರಣದಲ್ಲೂ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗಿ ಬಂದಿದೆ.