ಡಿ.ಕೆ.ಸುರೇಶ್ ಹೆಸರು ಬಳಸಿ ಗೋಲ್ಡ್ ಸ್ಕ್ಯಾಮ್ ಪ್ರಕರಣದ ಆರೋಪಿ ಐಶ್ವರ್ಯಾ ಗೌಡ ವಿರುದ್ಧ, ಮಂಡ್ಯ ಪೂರ್ವ ಠಾಣೆಯಲ್ಲಿ ಫ್ರಾಡ್ ಕೇಸ್ ದಾಖಲಾಗಿದೆ. ಏಳೆಂಟು ವರ್ಷಗಳ ಹಿಂದೆ 55 ಲಕ್ಷ ನಗದು ಹಾಗೂ ನೂರು ಗ್ರಾಂ ಚಿನ್ನಾಭರಣ ಪಡೆದು ವಂಚನೆ ಮಾಡಿದ್ದಾರೆ ಎಂಬುದಾಗಿ ರವಿಕುಮಾರ್, ಪೂರ್ಣಿಮಾ ಎಂಬುವರಿಂದ ದೂರು ದಾಖಲಾಗಿದೆ. ದೂರಿನ ಬೆನ್ನಲ್ಲೇ ಸಾಕ್ಷಿ ಕಲೆ ಹಾಕುತ್ತಿರುವ ಪೊಲೀಸರು, ಐಶ್ವರ್ಯಾ ಗೌಡಗೆ ನೋಟಿಸ್ ಕೊಟ್ಟು ವಿಚಾರಣೆಗೆ ಕರೆಸಲು ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ.