ಕರ್ನಾಟಕ

ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಅಸ್ತು ಎಂದ ಸಿಎಂ

ಆಶಾ ಕಾರ್ಯಕರ್ತರು ಅನಿರ್ದಿಷ್ಟಾವಧಿ ನಡೆಸುತ್ತಿದ್ದ ಮುಷ್ಕರ ಅಂತ್ಯಗೊಳಿಸಲಾಗಿದೆ.. ಕಳೆದ 4 ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಕೊನೆಗೂ ಮುಕ್ತಾಯಗೊಂಡಿದೆ..

ಮಾಸಿಕ 15,000 ರೂ.ಗಳ ನಿಗದಿತ ಗೌರವಧನ ಮತ್ತು ಇತರ ಸೌಲಭ್ಯಗಳ ನೀಡುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ವಾಪಸ್‌ ಪಡೆಯಲು ನಿರ್ಧರಿಸಿದ್ದಾರೆ.. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರ ಸಂಧಾನ ಯಶಸ್ವಿ ಹಿನ್ನೆಲೆ ಪ್ರತಿಭಟನೆ ವಾಪಸ್‌ ಪಡೆಯಲು ನಿರ್ಧರಿಸಲಾಗಿದೆ.. ಬೆಂಗಳೂರಿನ ಸಿಎಂ ಗೃಹಕಚೇರಿ ಕೃಷ್ಟಾದಲ್ಲಿ ಮಹತ್ವದ ಮೀಟಿಂಗ್‌ ನಡೆದಿದ್ದು, ಆಶಾ ಕಾರ್ಯಕರ್ತರು ಅನಿರ್ದಿಷ್ಟಾವಧಿ ನಡೆಸುತ್ತಿದ್ದ ಮುಷ್ಕರ ಅಂತ್ಯಗೊಳಿಸಲಾಗಿದೆ.. ಕಳೆದ 4 ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಕೊನೆಗೂ ಮುಕ್ತಾಯಗೊಂಡಿದೆ