ಕರ್ನಾಟಕ

ಹೊಸ ವರ್ಷಾಚರಣೆಗೆ ಕೌಂಟ್‌ಡೌನ್...ಇಂದು ಮಧ್ಯಾಹ್ನ ಸಭೆ..!

ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದೆ. ಇದರ ಸಲುವಾಗಿ ಇಂದು ಮಧ್ಯಾಹ್ನ 2 ಗಂಟೆಗೆ, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ನೇತೃತ್ವದಲ್ಲಿ ಸಭೆ ನಡೆಯಲಿದೆ.

 ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದೆ. ಇದರ ಸಲುವಾಗಿ ಇಂದು ಮಧ್ಯಾಹ್ನ 2 ಗಂಟೆಗೆ, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ನೇತೃತ್ವದಲ್ಲಿ ಸಭೆ ನಡೆಯಲಿದೆ. ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ, ಡಿಜಿ & ಐಜಿಪಿ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್, ಎಲ್ಲಾ ವಿಭಾಗದ ಡಿಸಿಪಿ ಮತ್ತು ಎಸಿಪಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಹೊಸ ವರ್ಷಾಚರಣೆ ಮಾರ್ಗಸೂಚಿ ಸೇರಿದಂತೆ ಭದ್ರತೆ ಬಗ್ಗೆ ಚರ್ಚೆ ನಡೆಯಲಿದೆ. ಹೊಸ ವರ್ಷದ ಜೊತೆ ಕ್ರಿಸ್‌ ಮಸ್‌ ಹಬ್ಬದ ಭದ್ರತೆ ಬಗ್ಗೆಯೂ ಚರ್ಚೆಯಾಗಲಿದೆ.