ದೇಶ

ಗಾಂಧೀಜಿ 77ನೇ ಪುಣ್ಯತಿಥಿ.. ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಸ್ಮರಣೆ

ಮಹಾತ್ಮ ಗಾಂಧೀಜಿ ಅವರ ಆದರ್ಶಗಳು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತವೆ.. ನಮ್ಮ ರಾಷ್ಟ್ರಕ್ಕಾಗಿ ಹುತಾತ್ಮರಾದ ಎಲ್ಲರಿಗೂ ಗೌರವ ಸಲ್ಲಿಸುತ್ತೇನೆ ಮತ್ತು ಅವರ ಸೇವೆ ಮತ್ತು ತ್ಯಾಗವನ್ನು ಸ್ಮರಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 77ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಯ ರಾಜ್‌ಘಾಟ್‌ಗೆ ತೆರಳಿ ಪುಷ್ಪ ನಮನ ಸಲ್ಲಿಸಿದ್ದಾರೆ.. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉಪರಾಷ್ಟ್ರಪತಿ ಜಗದೀಪ್ ಧನ್ಕರ್,  ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್, ಎಲ್ಲಾ ಮೂರು ಸೇವೆಗಳ ಮುಖ್ಯಸ್ಥರು ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಉಪಸ್ಥಿತರಿದ್ದರು.

ಮಹಾತ್ಮ ಗಾಂಧೀಜಿ ಅವರ ಆದರ್ಶಗಳು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತವೆ.. ನಮ್ಮ ರಾಷ್ಟ್ರಕ್ಕಾಗಿ ಹುತಾತ್ಮರಾದ ಎಲ್ಲರಿಗೂ ಗೌರವ ಸಲ್ಲಿಸುತ್ತೇನೆ ಮತ್ತು ಅವರ ಸೇವೆ ಮತ್ತು ತ್ಯಾಗವನ್ನು ಸ್ಮರಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್‌ ನಾಯಕರು ಗಾಂಧೀಜಿ ಸ್ಮಾರಕಕ್ಕೆ ನಮನ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್‌ ಗಾಂಧಿ ರಾಜ್‌ಘಾಟ್‌ಗೆ ಭೇಟಿ ನೀಡಿದ್ದಾರೆ.. ಮಹಾತ್ಮ ಗಾಂಧೀಜಿ ಅವರ ಆದರ್ಶಗಳನ್ನ ಮೆಲುಕು ಹಾಕಿದ್ದಾರೆ.