ಮಂಡ್ಯ ಜಿಲ್ಲೆಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ನಡೆದಿದೆ.. 8 ವರ್ಷದ ಬಾಲಕಿಗೆ ಚಾಕು ಹಾಕೋದಾಗಿ ಹೆದರಿಸಿ ಅತ್ಯಾಚಾರ ಎಸಗಿಲಾಗಿದೆ.. ಹಾಡಹಗಲೇ ಸರ್ಕಾರಿ ಶಾಲಾ ಆವರಣದಲ್ಲಿ ಜನವರಿ 31ರಂದು ಘಟನೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.. ಬಾಲಕಿಗೆ ಎರಡು ದಿನ ಕಳೆದರೂ ಹೊಟ್ಟೆ ನೋವು, ರಕ್ತಸ್ರಾವ ನಿಲ್ಲದ ಹಿನ್ನೆಲೆ ವಿಚಾರಿಸಿದಾಗ ಕೃತ್ಯ ಬಯಲಾಗಿದೆ.. ಸಂತ್ರಸ್ತ ಬಾಲಕಿಗೆ ಮಂಡ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..