ದೇಶ

ಗ್ಯಾಂಗ್‌ ಸ್ಟರ್ ಬಿಷ್ಣೋಯ್ ತಮ್ಮನ ಸುಳಿವು ನೀಡಿದವರಿಗೆ 10 ಲಕ್ಷ ರೂ ಬಹುಮಾನ..!

ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದ ಶೂಟರ್‌ಗಳು, ಅನ್ಮೋಲ್‌ ಸೂಚನೆ ಮೇರೆಗೆ ನಟನನ್ನು ಕೊಲ್ಲುವುದಕ್ಕಾಗಿ ಕೃತ್ಯ ನಡೆಸಿದ್ದಾಗಿ ಪೊಲೀಸ್‌ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಎಂದೂ ವರದಿಯಾಗಿದೆ.

ಬಾಬಾ ಸಿದ್ದಿಕಿ ಹತ್ಯೆಯ ಮಾಸ್ಟರ್ ಮೈಂಡ್, ಗ್ಯಾಂಗ್‌ ಸ್ಟರ್ ಲಾರೆನ್ಸ್ ಬಿಷ್ಣೋಯ್ ಎಂಬ ಪಾತಕಿ, ಸದ್ಯ,  ಮುಂಬೈ NIA ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಸುಳಿವು ನೀಡಿದವರಿಗೆ 10 ಲಕ್ಷ ರು. ಬಹುಮಾನ ನೀಡುವುದಾಗಿ ಘೋಷಿಸಿದೆ. ಎನ್‌ ಐಎ 2022ರಲ್ಲಿ ದಾಖಲಿಸಿರುವ ಎರಡು ಪ್ರಕರಣಗಳಲ್ಲಿ ಅನ್ಮೋಲ್‌ ವಿರುದ್ಧ ಆರೋಪಪಟ್ಟಿ ಸಲ್ಲಿಕೆಯಾಗಿದೆ.

ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಸುಳಿವು ನೀಡಿದವರಿಗೆ 10 ಲಕ್ಷ ರು. ಬಹುಮಾನ ಘೋಷಿಸಿದ NIA

ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದ ಶೂಟರ್‌ಗಳು, ಅನ್ಮೋಲ್‌ ಸೂಚನೆ ಮೇರೆಗೆ ನಟನನ್ನು ಕೊಲ್ಲುವುದಕ್ಕಾಗಿ ಕೃತ್ಯ ನಡೆಸಿದ್ದಾಗಿ ಪೊಲೀಸ್‌ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಎಂದೂ ವರದಿಯಾಗಿದೆ. 'ಭಾನು' ಎಂದೂ ಕರೆಯಲ್ಪಡುವ ಅನೋಲ್ ಬಿಷ್ಣೋಯ್ ನಕಲಿ ಪಾಸ್ ಪೋರ್ಟ್ ಮೇಲೆ ಭಾರತದಿಂದ ಪಲಾಯನ ಮಾಡಿ, ಕಳೆದ ವರ್ಷ ಕೀನ್ಯಾದಲ್ಲಿ ಮತ್ತು ಈ ವರ್ಷ ಕೆನಡಾದಲ್ಲಿ ಕಾಣಿಸಿಕೊಂಡಿದ್ದ. ಅಕ್ಟೋಬರ್ 12 ರಂದು ಮುಂಬೈನ ಬಾಂದ್ರಾದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆಯ ಹಿಂದೆ ಅನ್ಮೋಲ್ ಬಿಷ್ಣೋಯ್ ಕೈವಾಡವಿದೆ ಎಂದು ಹೇಳಲಾಗಿದೆ. 2022ರಲ್ಲಿ ಪಂಜಾಬ್ ಗಾಯಕ ಸಿಧು ಮೊಸೆವಾಲಾ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಆತ ಬೇಕಾಗಿದ್ದಾನೆ. ಅನ್ಮೋಲ್ ಬಿಷ್ಣೋಯ್ ವಿರುದ್ಧ 18 ಪ್ರಕರಣಗಳು ದಾಖಲಾಗಿವೆ. ಪಂಜಾಬ್‌ ನ ಫಾಜಿಲ್ಕಾ ಮೂಲದ ಅನ್ಮೋಲ್ ಬಿಷ್ಣೋಯ್ ಮತ್ತು ಲಾರೆನ್ಸ್ ಬಿಷ್ಣೋಯ್ ಇಬ್ಬರನ್ನೂ ಪ್ರಕರಣದಲ್ಲಿ ಬೇಕಾಗಿರುವ ಆರೋಪಿಗಳೆಂದು ಹೇಳಲಾಗಿದೆ. ಲಾರೆನ್ಸ್ ಬಿಷ್ಣೋಯ್ ಅವರು ಪ್ರಸ್ತುತ ಗುಜರಾತ್‌ ನ ಸಬರಮತಿ ಜೈಲಿನಲ್ಲಿದ್ದಾನೆ.