6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ.. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ.. ನಿನ್ನೆ ರಾತ್ರಿ 7:30ಕ್ಕೆ ಘಟನೆ ನಡೆದಿದ್ದು, ನೇಪಾಳ ಮೂಲದ ಕುಟುಂಬಕ್ಕೆ ಬಾಲಕಿ ಸೇರಿದ್ದಾಳೆ.. ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದಾಗ ಆರೋಪಿ ಅಭಿಷೇಕ್ ಕುಮಾರ್ ಕೃತ್ಯ ಎಸಗಿದ್ದಾನೆ.. ಆರೋಪಿಯನ್ನ ಸ್ಥಳೀಯರೇ ಸೆರೆ ಹಿಡಿದಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ.. ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.. ಘಟನೆ ಸಂಬಂಧ ಪೊಲೀಸರು ಆರೋಪಿಯನ್ನ ವಿಚಾರಣೆ ನಡೆಸುತ್ತಿದ್ದಾರೆ..