ಕಳ್ಳನೊಬ್ಬ ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯನ್ನು ಹೆದರಿಸಿ ಕಳ್ಳತನ ಮಾಡಿರುವ ಘಟನೆ, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದಲ್ಲಿರುವ ಮೆಳ್ಳಹಳ್ಳಿಯಲ್ಲಿ ನಡೆದಿದೆ. ಹರ್ಷಿತಾ ಎಂಬುವರ ಮನೆಯಲ್ಲಿ ಒಬ್ಬರೇ ಇದ್ದದ್ದು ಗಮನಿಸಿದ್ದ ಕಿಡಿಗೇಡಿಗಳು, ಮಾರಕಾಸ್ತ್ರಗಳಿಂದ ಮಹಿಳೆಯನ್ನು ಹೆದರಿಸಿ ಕಳ್ಳತನ ಮಾಡಿದ್ದಾರೆ.
ಬೀರುವಿನಲ್ಲಿದ್ದ ಸುಮಾರು 25 ಗ್ರಾಂ ಚಿನ್ನಾಭರಣ ಹಾಗೂ 1.60 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಕೃಷ್ಣಪ್ಪ ನೇತೃತ್ವದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.