ಶಿವಮೊಗ್ಗ : ಮಲೆನಾಡು ಶಿವಮೊಗ್ಗ ಮಂದಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಗುಡ್ ನ್ಯೂಸ್ ನೀಡಿದ್ದಾರೆ. ಶಿವಮೊಗ್ಗ ಶಿಕಾರಿಪುರ ರೈಲ್ವೆ ಯೋಜನೆಯ ಕೆಲಸ ಈಗಾಗಲೇ ಆರಂಭವಾಗಿದ್ದು, 2026ರರೊಳಗೆ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು.
ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ವಿ. ಸೋಮಣ್ಣ, ಮೋದಿ ಮೂರನೇ ಬಾರಿ ಪ್ರಧಾನಿಯಾದ ಮೇಲೆ ರೈಲ್ವೆ ಇಲಾಖೆ ಐತಿಹಾಸಿಕ ಕಾರ್ಯಗಳನ್ನು ಮಾಡುತ್ತಿದೆ. ಕರ್ನಾಟಕದಲ್ಲಿ ಕೋಚಿಂಗ್ ಡಿಪೋ ಸಿದ್ಧವಾಗುತ್ತಿದ್ದು, ಶಿವಮೊಗ್ಗದಲ್ಲೇ ಆಗುತ್ತಿರುವುದು ಗಮನಾರ್ಹ. ರೈಲ್ವೆ ಇಲಾಖೆಯಲ್ಲಿ ಕಳಪೆ ಕಾಮಗಾರಿ ಸಹಿಸಲ್ಲ. ರೈಲ್ವೆ ಇಲಾಖೆ ಎಂಬುದು ರಕ್ಷಣಾ ಇಲಾಖೆ ಇದ್ದ ಹಾಗೆ. ಇನ್ನು ಎರಡರಿಂದ ಮೂರು ತಿಂಗಳಲ್ಲಿ ವಂದೇ ಭಾರತ್ ರೈಲು ಶಿವಮೊಗ್ಗಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಹೇಳಿದರು.