ಕರ್ನಾಟಕ

ಶಕ್ತಿ ಯೋಜನೆ ನಿಲ್ಲಿಸಲು ಸರಕಾರದ ಹುನ್ನಾರ.. DK ಶಿವಕುಮಾರ್ ಹೇಳಿಕೆಗೆ HDK ಕಿಡಿ

ಒಂದೂವರೆ ವರ್ಷದಲ್ಲಿ ಮಹಿಳೆಯರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆಯೇ? ಎಂದು ಪ್ರಶ್ನೆ ಮಾಡಿದ್ದು, ಟ್ವೀಟ್ ಮೂಲಕ ಮಹಿಳೆಯರು ಶಕ್ತಿ ಯೋಜನೆಯನ್ನು ನಿಲ್ಲಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಯಾರು ಟ್ವೀಟ್ ಮಾಡಿದ್ದಾರೆ? ಅಥವಾ ಮಹಿಳೆಯರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆ ಎಂದು ಇವರಿಗೆ ಹೊಸ ಜ್ಞಾನೋದಯ ಆಗಿದೆಯಾ? ಕೇವಲ ಒಂದೂವರೆ ವರ್ಷದಲ್ಲಿ ಇವರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆಯೇ? ಎಂದು ಪ್ರಶ್ನಿಸಿದರು ಕೇಂದ್ರ ಸಚಿವರು. ​

ಚನ್ನಪಟ್ಟಣ : ಶಕ್ತಿ ಯೋಜನೆ ನಿಲ್ಲಿಸಲು ಸರಕಾರದ ಹುನ್ನಾರ ನಡೆಸಿದೆ ಎಂದು HD ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಮರು ಪರಿಶೀಲನೆ ಎನ್ನುವುದು ನಾಟಕ, 5 ಗ್ಯಾರಂಟಿ ನಿಲ್ಲಿಸಲು ಇದು ಮೊದಲ ಹೆಜ್ಜೆ ಎಂದರು. ಡಿ.ಕೆ. ಶಿವಕುಮಾರ್ ಹೇಳಿಕೆಗೆ HDK ಕಿಡಿಕಾರಿದ್ದಾರೆ. ಡಿಕೆಶಿ ಅವರಿಗೆ ಮಹಿಳೆಯರು ಕನಸಿನಲ್ಲಿ ಬಂದು ಶಕ್ತಿ ಯೋಜನೆಯನ್ನು ನಿಲ್ಲಿಸಿ ಎಂದು ಕೇಳಿದ್ದಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಇದೇ ವೇಳೆ ಮಅತನಾಡಿದ ಅವರು, ರಾಜ್ಯ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗಿರುವ ಶಕ್ತಿ ಯೋಜನೆಯನ್ನು ಸ್ಥಗಿತ, ಇಲ್ಲವೇ ಮರು ಪರಿಶೀಲನೆ ಮಾಡುವ ಹೇಳಿಕೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಕೆಶಿ ಅವರಿಗೆ ಮಹಿಳೆಯರು ಕನಸಿನಲ್ಲಿ ಬಂದು ಶಕ್ತಿ ಯೋಜನೆಯನ್ನು ನಿಲ್ಲಿಸಿ ಎಂದು ಕೇಳಿದ್ದಾರೆಯೇ? ಅಥವಾ ದೇವರು ಬಂದು ಹೇಳಿದ್ದಾರೆಯೇ? ಒಂದೊಂದಾಗಿ 5 ಗ್ಯಾರಂಟಿಗಳನ್ನು ನಿಲ್ಲಿಸಲು ಇದೊಂದು ಮೊದಲ ಹೆಜ್ಜೆ ಅಷ್ಟೇ. ಇನ್ನು ಕೆಲವೇ ದಿನಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವ ನಿಧಿ ಕಾರ್ಯಕ್ರಮಗಳನ್ನು ನಿಲ್ಲಿಸಲಿದ್ದಾರೆ. ಅದಕ್ಕೆ ಇವರು ಮರು ಪರಿಶೀಲನೆ ಎಂಬ ಪೀಠಿಕೆ ಹಾಕಿಕೊಂಡಿದ್ದಾರೆ ಎಂದರು.

ಒಂದೂವರೆ ವರ್ಷದಲ್ಲಿ ಮಹಿಳೆಯರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆಯೇ? ಎಂದು ಪ್ರಶ್ನೆ ಮಾಡಿದ್ದು, ಟ್ವೀಟ್ ಮೂಲಕ ಮಹಿಳೆಯರು ಶಕ್ತಿ ಯೋಜನೆಯನ್ನು ನಿಲ್ಲಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಯಾರು ಟ್ವೀಟ್ ಮಾಡಿದ್ದಾರೆ? ಅಥವಾ ಮಹಿಳೆಯರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆ ಎಂದು ಇವರಿಗೆ ಹೊಸ ಜ್ಞಾನೋದಯ ಆಗಿದೆಯಾ? ಕೇವಲ ಒಂದೂವರೆ ವರ್ಷದಲ್ಲಿ ಇವರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆಯೇ? ಎಂದು ಪ್ರಶ್ನಿಸಿದರು ಕೇಂದ್ರ ಸಚಿವರು.