ಮಂಡ್ಯ : ಸತತ ಮಳೆಗೆ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದುಬಿದ್ದ ಘಟನೆಯೊಂದು ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಬಳ್ಳೇಕೆರೆ ಗ್ರಾಮದಲ್ಲಿ ನಡೆದಿದೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ. ಶಾಲೆಯ ಮಕ್ಕಳು ಆಟಕ್ಕೆಂದು ಹೊರಗೆ ಹೋದ ತಕ್ಷಣ ಮೇಲ್ಛಾವಣಿ ಕುಸಿದು ಬಿದ್ದಿದೆ. ಶಾಲೆಯ ಕೊಠಡಿಯಲ್ಲಿ ಮಕ್ಕಳು ಇದ್ದಾಗ ಕುಸಿದಿದ್ರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ಘಟನೆ ಸಂಭವಿಸುತ್ತಿದ್ದಂತೆ ಶಾಲೆಯ ಶಿಕ್ಷಕರು ಎಚ್ಚೆತ್ತುಕೊಂಡಿದ್ದಾರೆ.

ಬಹುತೇಕ ಈ ಶಾಲೆಯಲ್ಲಿನ ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು, ಈ ಕಾರಣಕ್ಕೆ ಮಕ್ಕಳನ್ನು ಹೊರಗೆ ಕೂರಿಸಿ ಶಿಕ್ಷಕರು ಪಾಠ ಪ್ರವಚನ ಮಾಡುತ್ತಿದ್ದು. ಈ ಶಾಲೆಯ ಅವ್ಯವಸ್ಥೆಗೆ ಮಕ್ಕಳ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಪ್ರತಿನಿಧಿಗಳು ಸೇರಿ ಶಿಕ್ಷಣ ಇಲಾಖೆ ವಿರುದ್ಧ ಪೋಷಕರು ಅಸಮಾಧಾನ ಹೊರಹಾಕಿದ್ದಾರೆ.

