ಕರ್ನಾಟಕ

ಕರ್ನಾಟಕ ಪ್ರವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಅವರಿಗೆ ಆತ್ಮಿಯವಾಗಿ ಸ್ವಾಗತಿಸಿದ ರಾಜ್ಯಪಾಲರು

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿಗಳು ನಂತರ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಮಂಡ್ಯ ಜಿಲ್ಲೆಯ ನಾಗಮಂಗಲದ ಬಿ.ಜಿ. ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯವು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಸಲುವಾಗಿ ಆದಿಚುಂಚನಗಿರಿಗೆ ಪ್ರಯಾಣ ಕೈಗೊಂಡರು.

ಬೆಂಗಳೂರು :  ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಶ್ರೀಮತಿ ಸುದೇಶ್ ಧನಕರ್ ಅವರು ಕರ್ನಾಟಕ ಪ್ರವಾಸಕ್ಕಾಗಿ ಇಂದು ಬೆಂಗಳೂರಿನ HAL ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಆಗಮಿಸಿದರು. ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು  ಆತ್ಮೀಯ ಸ್ವಾಗತಿಸಿದ್ಧಾರೆ.

ಭಾರತದ ಘನತೆವೆತ್ತ ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ಶ್ರೀಮತಿ ಸುದೇಶ್ ಧನಕರ್ ಅವರನ್ನು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು  ಆತ್ಮೀಯ ಸ್ವಾಗತಿಸಿದ್ಧಾರೆ. ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿಗಳು ನಂತರ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ  ಹೆಲಿಕ್ಯಾಪ್ಟರ್ ಮೂಲಕ ಮಂಡ್ಯ ಜಿಲ್ಲೆಯ ನಾಗಮಂಗಲದ ಬಿ.ಜಿ. ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯವು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಸಲುವಾಗಿ ಆದಿಚುಂಚನಗಿರಿಗೆ  ಪ್ರಯಾಣ ಕೈಗೊಂಡರು.  

ಈ ಸಂದರ್ಭದಲ್ಲಿ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ,   ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್,  ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಸತ್ಯವತಿ ಜಿ,  ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್,  ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಜಗದೀಶ್ ಜಿ,  ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ. ದಯನಂದ ಸೇರಿದಂತೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.