ಜಾತಿಗಣತಿ ವರದಿಯನ್ನು ಅನುಷ್ಠಾನಕ್ಕೆ ತರುವ ವಿಚಾರದ ಬಗ್ಗೆ, ಕಾಂಗ್ರೆಸ್ ನಲ್ಲೇ ವಿರೋಧ ಕೇಳಿ ಬರುತ್ತಿದೆ. ಮಾಜಿ ಸಚಿವ ಹಾಗೂ ಗುಬ್ಬಿ ಶಾಸಕರಾಗಿರುವಂತಹ, ಎಸ್.ಆರ್.ಶ್ರೀನಿವಾಸ್ ಜಾತಿಗಣತಿ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ವರದಿಯ ಬಗ್ಗೆ ಎಲ್ಲರೊಂದಿಗೆ ಚರ್ಚಿಸಿದ ನಂತರ ಕ್ಯಾಬಿನೆಟ್ ಗೆ ತರಲಿ. ಇದು ಅವೈಜ್ಞಾನಿಕ ಜಾತಿಗಣತಿ. ಎಲ್ಲಾ ಸಮುದಾಯಕ್ಕೂ ಸಾಮಾಜಿಕ, ಶೈಕ್ಷಣಿಕ ನ್ಯಾಯ ಸಿಗಬೇಕು. ಆ ರೀತಿಯಲ್ಲಿ ವರದಿಯನ್ನ ಮತ್ತೊಮ್ಮೆ ತಯಾರಿಸಿ ಬಿಡುಗಡೆ ಮಾಡಲಿ ಎಂದಿದ್ದಾರೆ.
ಇದರ ಬಗ್ಗೆ ನಾನು ಈ ಹಿಂದೆ ಪ್ರಸ್ತಾಪ ಮಾಡಿದ್ದೆ. ನಮ್ಮ ಒಕ್ಕಲಿಗರಲ್ಲಿ ಒಳಪಂಗಡಗಳಿವೆ. ಲಿಂಗಾಯತರಲ್ಲೂ ಒಳಪಂಗಡಗಳಿವೆ. ಕುಂಚಿಟಿಗರು ಕೇವಲ ಕುಂಚಿಟಿಗ ಅಂತ ಬರೆದಿರ್ತಾರೆ. ನಮ್ಮಲ್ಲಿ ಕುಂಚಿಟಿಗ ಒಕ್ಕಲಿಗ ಅಂತ ಬರೆದಿರಲ್ಲ. ಸರ್ಪ ಒಕ್ಕಲಿಗರು ಇದ್ದಾಗ ಕೇವಲ ಸರ್ಪರು ಅಂತ ಬರಿತಾರೆ. ಅದ್ಯಾವುದು ಕೂಡಾ ಆಗ ನಮ್ಮ ಸಮುದಾಯದ ಪಟ್ಟಿಯಲ್ಲಿ ಬರಲ್ಲ. ಇವರು ವರದಿ ತಯಾರು ಮಾಡಿದವರು ಕೂಡಾ ಕುಂಚಿಟಿಗ ಅಂತ ಬರೆದುಕೊಂಡು ಹೋಗಿರ್ತಾರೆ. ನಮ್ಮಲ್ಲಿ ವಿರೋಧ ಯಾಕೆ ಅಂದ್ರೆ ಒಟ್ಟಿಗೆ ಒಕ್ಕಲಿಗ ಅಂತ ಮಾಡಲಿ ಅಂತ. ಲಿಂಗಾಯತ ಸಮುದಾಯದಲ್ಲೂ ಸಹ ಅದೇ ರೀತಿ ಆಗಿರಬಹುದು ಎಂದಿದ್ದಾರೆ.