ಕರ್ನಾಟಕ

ಹುಬ್ಬಳ್ಳಿಯಲ್ಲಿಂದು ಗುಂಡಿನ ಸದ್ದು : 17 ಕಳ್ಳತನ ಕೇಸ್ ನಲ್ಲಿ ಬೇಕಿದ್ದ ಆರೋಪಿ ಕಾಲಿಗೆ ಗುಂಡೇಟು

ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರಿಂದ ಇದೀಗ ಗುಂಡಿನ ದಾಳಿ ನಡೆದಿದೆ ಎಂದು ತಿಳಿದುಬಂದಿಂದೆ. ಕಳ್ಳತನ ಪ್ರಕರಣದಲ್ಲಿ ಪೊಲೀಸರು ನಿನ್ನೆ ವಿನೋದನನ್ನು ಬಂಧಿಸಿದ್ದರು. ತನ್ನ ಸಹಚರನ್ನು ತೋರಿಸುತ್ತೇನೆ ಎಂದು ವಿನೋದ್ ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಪೊಲೀಸರ ಮೇಲೆ ವಿನೋದ್ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.

ಹುಬ್ಬಳ್ಳಿ : ಸುಮಾರು 17 ಕಳ್ಳತನ ಕೇಸ್ ನಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿ ಮತ್ತು ಧಾರವಾಡ ಕಮಿಷನರೇಟ್ ವ್ಯಾಪ್ತಿಯ ಆರೋಪಿಯ ಮೇಲೆ ಹುಬ್ಬಳ್ಳಿ ತಾಲೂಕಿನ ಬೆಂಡಿಗೇರಿ ಠಾಣೆಯ ಎಸ್‌ ಐ ಆರೋಪಿ ಕಾಲಿಗೆ ಗುಂಡು ಹಾರಿಸಿರುವ ಘಟನೆಯೊಂದು ನಡೆದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Two Thieves Injured in Police Firing in Assam's Guwahati

ಆರೋಪಿ ವಿನೋದ್ ಕಾಲಿಗೆ ಗುಂಡು ಹಾರಿಸಲಾಗಿದ್ದು, ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರಿಂದ ಇದೀಗ ಗುಂಡಿನ ದಾಳಿ ನಡೆದಿದೆ ಎಂದು ತಿಳಿದುಬಂದಿಂದೆ. ಕಳ್ಳತನ ಪ್ರಕರಣದಲ್ಲಿ ಪೊಲೀಸರು ನಿನ್ನೆ ವಿನೋದನನ್ನು ಬಂಧಿಸಿದ್ದರು. ತನ್ನ ಸಹಚರನ್ನು ತೋರಿಸುತ್ತೇನೆ ಎಂದು ವಿನೋದ್ ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಪೊಲೀಸರ ಮೇಲೆ ವಿನೋದ್ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಬೆಂಡಿಗೇರಿ ಠಾಣೆಯ ಪೊಲೀಸ್ ಇನ್ಸ್‌ ಪೆಕ್ಟರ್ ಜಯಶ್ರೀ ಛಲವಾದಿ,  ಕಾನ್ಸ್‌ಟೇಬಲ್‌ ರಮೇಶ್ ಹಿತ್ತಲಮನಿ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಆತ್ಮ ರಕ್ಷಣೆಗಾಗಿ ಪಿಐಜಯಶ್ರೀ ವಿನೋದ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿಂದೆ.