ಮಂಡ್ಯ ಜಿಲ್ಲೆಯ ತೆರೆಕಾಡನಹಳ್ಳಿಗೆ ಸಿಎಂ ಭೇಟಿ ಹಿನ್ನೆಲೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ, ಹಲಗೂರು ಗ್ರಾಮ ಪಂಚಾಯ್ತಿ ಸದಸ್ಯ ಕೆ.ಸುರೇಂದ್ರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ಳಂ ಬೆಳಗ್ಗೆಯೇ ಸುರೇಂದ್ರ ಮನೆಗೆ ಭೇಟಿ ನೀಡಿ, ವಶಕ್ಕೆ ಪಡೆದು ಮದ್ದೂರು ಪೊಲೀಸ್ ಠಾಣೆಗೆ ಕರೆದೊಯ್ದರು.
ಈ ಹಿಂದೆ ಗ್ರಾಮ ಪಂಚಾಯ್ತಿ ಸದಸ್ಯ ಸುರೇಂದ್ರ ಅವರು ಹಲಗೂರು ಪಿಡಿಒ ಸಿ.ರುದ್ರಯ್ಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸಿಎಂ, ಸಚಿವರು ಹಾಗೂ ಸರ್ಕಾರಕ್ಕೆ ದೂರು ನೀಡಿದ್ದರು.